ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ.
ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಪರಿಣಾಮ ಜನರು ತಂಪು ಪಾನೀಯಗಳ ಮೊರೆ ಹೋಗಿದ್ದಾರೆ.
ಇದರ ನಡುವೆ ಹವಾಮಾನ ಇಲಾಖೆ ನಾಳೆ ಹಾಗೂ ನಾಡಿದ್ದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ರೈತರು ಕಾಡ್ಗಿಚ್ಚು, ಮೇವಿನ ಕೊರತೆಗೆ ತಾತ್ಕಾಲಿಕ ಬ್ರೇಕ್ ಬೀಳುವ ನಿರೀಕ್ಷೆಯಲ್ಲಿದ್ದಾರೆ.
ಇನ್ನು ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹಾಗೂ ಜಲಾಶಯದ ಒಳಹರಿವು ಈ ಕೆಳಕಂಡಂತಿದೆ.
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ 111.61 ಅಡಿಗಳಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ. ಜಲಾಶಯಕ್ಕೆ 136 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 1547 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಇನ್ನು ಎಚ್.ಡಿ.ಕೋಟೆಯ ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 72.92 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದೆ. ಜಲಾಶಯಕ್ಕೆ ಕೇವಲ 82 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 750 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.





