Mysore
20
overcast clouds
Light
Dark

ನಾಳೆ 2ನೇ ಆಷಾಢ ಶುಕ್ರವಾರದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಸಿದ್ಧತೆ ಹೇಗಿದೆ ಗೊತ್ತಾ.?

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ.

ನಾಳೆ 2ನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಪ್ರತಿ ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

ಮೈಸೂರು ಜಿಲ್ಲಾಡಳಿತವು ಭಕ್ತರಿಗೆ ತೊಂದರೆಯಾಗದಂತೆ ದೇವಿಯ ದರ್ಶನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ನಾಳೆಯೂ ಕೂಡ ಸಾವಿರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಬರುವ ನಿರೀಕ್ಷೆಯಿದ್ದು, ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಚಾಮುಂಡಿ ತಾಯಿಯ ದರ್ಶನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಹಲವಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ನಾಳೆ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ.

ಇನ್ನೂ ದೇವಾಲಯದಲ್ಲಿ ವಿಶೇಷ ಪೂಜೆಗಾಗಿ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಪ್ರಸಾದ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ.