Mysore
14
few clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ನಾಳೆ ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ

ಮೈಸೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ.

ನಾಳಿನ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಇಂದು ಸಿದ್ಧತೆ ಭರದಿಂದ ಸಾಗಿದ್ದು, ದೇವಾಲಯವನ್ನು ತಳಿರು ತೋರಣ ಹಾಗೂ ವಿವಿಧ ಬಗೆಯ ಹೂವುಗಳಿಂದ ಸಿಂಗರಿಸಲಾಗುತ್ತಿದೆ. ದೇವಾಲಯದ ಸಿಬ್ಬಂದಿಗಳೇ ದೇಗುಲವನ್ನು ಸ್ವಚ್ಛಗೊಳಿಸಿ ಸಿಂಗರಿದ್ದಾರೆ.

ನಾಳೆ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ಅವಕಾಶ ಇರುವುದಿಲ್ಲ. ಮೈಸೂರು ಜಿಲ್ಲಾಡಳಿತ ಸಾರ್ವಜನಿಕರಿಗೆ ತೊಂದರೆಯಾಗದಂತೆ ದೇವಿಯ ದರ್ಶನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ನಾಳೆಯೂ ಕೂಡ ಸಾವಿರಾರು ಮಂದಿ ಚಾಮುಂಡಿಬೆಟ್ಟಕ್ಕೆ ಹೋಗುವ ನಿರೀಕ್ಷೆಯಿದ್ದು, ಎಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

ಇನ್ನು ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಹಲವಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ನಾಳೆ ಸಾವಿರಾರು ಮಂದಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ತಾಯಿ ಚಾಮುಂಡಿಯ ದರ್ಶನ ಪಡೆದು ಪುನೀತರಾಗುತ್ತಾರೆ. ದೇವಾಲಯದಲ್ಲಿ ವಿಶೇಷ ಪೂಜೆಗಾಗಿ ಆಗಮಿಸುವ ಎಲ್ಲರಿಗೂ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಪ್ರಸಾದ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ.

 

Tags:
error: Content is protected !!