ಮೈಸೂರು: ನಾಳೆ ಆಯುಧಪೂಜೆಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ.
ಇಂದು ಬೆಳಿಗ್ಗೆಯಿಂದಲೇ ಜನರು ಹೂವು-ಹಣ್ಣು, ಬಾಳೆಕಂಬ ಸೇರಿದಂತೆ ಪೂಜಾ ಸಾಮಾಗ್ರಿಗಳನ್ನು ಖರೀದಿ ಮಾಡುತ್ತಿದ್ದು, ಹೂವುಗಳ ಬೆಲೆಯಂತೂ ಗಗನಕ್ಕೇರಿದೆ.
ಇನ್ನು ಕೆಲವು ಹಣ್ಣುಗಳು ಮತ್ತು ಹೂವುಗಳ ಬೆಲೆಗಳು ಕಳೆದ ವಾರದಿಂದಲೇ ಹೆಚ್ಚಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ.
ಆಯುಧಪೂಜೆಯ ಹಿನ್ನೆಲೆಯಲ್ಲಿ ಸೇವಂತಿಗೆ, ಮಾರಿಗೋಲ್ಡ್ ಹಾಗೂ ಗುಲಾಬಿ ಹೂಗಳಿಗೆ ಬೇಡಿಕೆ ಹೆಚ್ಚಾಗಿದ್ದರೂ ಗ್ರಾಹಕರು ಖರೀದಿ ಮಾಡುತ್ತಿರುವುದು ವಿಶೇಷವೆನಿಸಿದೆ.
ಮೈಸೂರಿನ ಪ್ರಮುಖ ರಸ್ತೆಗಳು ಹಾಗೂ ದೇವರಾಜ ಮಾರುಕಟ್ಟೆಯಲ್ಲಿ ಜನಜಂಗುಳಿ ಏರ್ಪಟ್ಟಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಜನಜಂಗುಳಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಜೆಯ ವೇಳೆಗೆ ಖರೀದಿ ಭರಾಟೆ ಇನ್ನೂ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…