ಮೈಸೂರು: ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್ ಜನರಿಗೆ ನೆರವಾಗುವ ಬಜೆಟ್ ಆಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ನಾಳೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವೈಫಲ್ಯ ಕಾಣುತ್ತಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ನೂರರಷ್ಟು ಬೇಕಾದರೂ ಹೇಳಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ಸಮಸ್ಯೆ ಉದ್ಬವಿಸುತ್ತಿದೆ. ಜನರ ಬದುಕು ಶೋಚನೀಯ ಸ್ಥಿತಿಗೆ ತಲುಪುತ್ತಿದೆ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವ ಆಗಿದೆ. ಹಾಗಾಗಿ ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್ ಜನರಿಗೆ ನೆರವಾಗುವ ಬಜೆಟ್ ಆಗಬೇಕು ಎಂದು ಆಗ್ರಹಿಸಿದರು.