Mysore
30
scattered clouds

Social Media

ಭಾನುವಾರ, 09 ಫೆಬ್ರವರಿ 2025
Light
Dark

ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ಬೆಳಿಗ್ಗೆ 10.50ಕ್ಕೆ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಸಾಂಸ್ಕೃತಿಕ ಮೇಳ ಹಾಗೂ ವಸ್ತು ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ನಂತರ ಶ್ರೀ ಸುತ್ತೂರು ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ, ವಾಲ್ಮೀಕಿ ಸಮುದಾಯ ಭವನ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಮಧ್ಯಾಹ್ನ 2.30ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ರಾಣಿ ಬಹದ್ದೂರು ಸಭಾಂಗಣದಲ್ಲಿ ಆದಿ ಕರ್ನಾಟಕ/ ಛಲವಾದಿ ಮಹಾಸಂಸ್ಥಾನ ಗುರುಪೀಠ ವತಿಯಿಂದ ಹಮ್ಮಿಕೊಂಡಿರುವ ಡಾ.ಬಿ.ಆರ್.‌ಅಂಬೇಡ್ಕರ್‌ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿರುವ ಕಾರ್ಯಕ್ರಮಗಳ ಕುರಿತು ಸಿಎಂ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Tags: