ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ನಾಳೆ ಬೆಳಿಗ್ಗೆ 10.50ಕ್ಕೆ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಸಾಂಸ್ಕೃತಿಕ ಮೇಳ ಹಾಗೂ ವಸ್ತು ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ನಂತರ ಶ್ರೀ ಸುತ್ತೂರು ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ, ವಾಲ್ಮೀಕಿ ಸಮುದಾಯ ಭವನ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ಮಧ್ಯಾಹ್ನ 2.30ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ರಾಣಿ ಬಹದ್ದೂರು ಸಭಾಂಗಣದಲ್ಲಿ ಆದಿ ಕರ್ನಾಟಕ/ ಛಲವಾದಿ ಮಹಾಸಂಸ್ಥಾನ ಗುರುಪೀಠ ವತಿಯಿಂದ ಹಮ್ಮಿಕೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿರುವ ಕಾರ್ಯಕ್ರಮಗಳ ಕುರಿತು ಸಿಎಂ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…