Mysore
19
overcast clouds
Light
Dark

ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ

ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್‌ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ ನಡೆಯಲಿದೆ.

ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಬೃಹತ್‌ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ.

ಜರ್ಮನ್‌ ಟೆಂಟ್‌ ಮಾದರಿಯ ವೇದಿಕೆ ನಿರ್ಮಿಸಲಾಗಿದ್ದು, ಮಳೆ ಬಂದರೂ ನೆನೆಯದ ರೀತಿ ಬೃಹತ್‌ ವೇದಿಕೆ ಸಿದ್ಧಗೊಂಡಿದೆ.

ಸುಮಾರು 50 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ.

ನಾಳೆ ನಡೆಯುವ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 4 ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇನ್ನು ನಾಳೆ ನಡೆಯುವ ಸಮಾವೇಶದಲ್ಲಿ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಹಾಗೂ ರಾಮನಗರದಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆಯಿದ್ದು, ಈ ಆರು ಜಿಲ್ಲೆಗಳ ಪ್ರತಿ ಗ್ರಾಮಗಳಿಗೆ 2 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನು ನಾಳಿನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಜೆಡಿಎಸ್‌ ಸರ್ಕಾರದಲ್ಲಿ ಆಗಿದ್ದ ಹಗರಣಗಳನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ ಠಕ್ಕರ್‌ ಕೊಡಲು ಮುಂದಾಗಿದ್ದಾರೆ.