ಮೈಸೂರು ನಗರ

ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ

ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್‌ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ ನಡೆಯಲಿದೆ.

ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಬೃಹತ್‌ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ.

ಜರ್ಮನ್‌ ಟೆಂಟ್‌ ಮಾದರಿಯ ವೇದಿಕೆ ನಿರ್ಮಿಸಲಾಗಿದ್ದು, ಮಳೆ ಬಂದರೂ ನೆನೆಯದ ರೀತಿ ಬೃಹತ್‌ ವೇದಿಕೆ ಸಿದ್ಧಗೊಂಡಿದೆ.

ಸುಮಾರು 50 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ.

ನಾಳೆ ನಡೆಯುವ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 4 ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇನ್ನು ನಾಳೆ ನಡೆಯುವ ಸಮಾವೇಶದಲ್ಲಿ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಹಾಗೂ ರಾಮನಗರದಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆಯಿದ್ದು, ಈ ಆರು ಜಿಲ್ಲೆಗಳ ಪ್ರತಿ ಗ್ರಾಮಗಳಿಗೆ 2 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನು ನಾಳಿನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಜೆಡಿಎಸ್‌ ಸರ್ಕಾರದಲ್ಲಿ ಆಗಿದ್ದ ಹಗರಣಗಳನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ ಠಕ್ಕರ್‌ ಕೊಡಲು ಮುಂದಾಗಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

35 mins ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

1 hour ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

2 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

2 hours ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

2 hours ago

ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ…

2 hours ago