ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ ನಡೆಯಲಿದೆ.
ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ.
ಜರ್ಮನ್ ಟೆಂಟ್ ಮಾದರಿಯ ವೇದಿಕೆ ನಿರ್ಮಿಸಲಾಗಿದ್ದು, ಮಳೆ ಬಂದರೂ ನೆನೆಯದ ರೀತಿ ಬೃಹತ್ ವೇದಿಕೆ ಸಿದ್ಧಗೊಂಡಿದೆ.
ಸುಮಾರು 50 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ.
ನಾಳೆ ನಡೆಯುವ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 4 ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇನ್ನು ನಾಳೆ ನಡೆಯುವ ಸಮಾವೇಶದಲ್ಲಿ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಹಾಗೂ ರಾಮನಗರದಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆಯಿದ್ದು, ಈ ಆರು ಜಿಲ್ಲೆಗಳ ಪ್ರತಿ ಗ್ರಾಮಗಳಿಗೆ 2 ಕೆಎಸ್ಆರ್ಟಿಸಿ ಬಸ್ಗಳನ್ನು ನಿಯೋಜನೆ ಮಾಡಲಾಗಿದೆ.
ಇನ್ನು ನಾಳಿನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದಲ್ಲಿ ಆಗಿದ್ದ ಹಗರಣಗಳನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ ಠಕ್ಕರ್ ಕೊಡಲು ಮುಂದಾಗಿದ್ದಾರೆ.
ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ತಮಿಳುನಾಡು: ಇಲ್ಲಿನ ಕಡಲೂರು ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವುದಾಗಿ ವರದಿಯಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 13ರವರೆಗೆ ಒಟ್ಟು 35,647 ಕೋಳಿಗಳು ಸಾವನ್ನಪ್ಪಿವೆ…
ದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆ, ಸಮಾವೇಶ ಹಾಗೂ ಸಾರ್ವಜನಿಕ ಸಭೆಗಳಿಗೆ ಹೊಸ ಮಾರ್ಗಸೂಚಿಗಳನ್ನು ದೆಹಲಿ ಪೊಲೀಸರು ಪ್ರಕಟಿಸಿರುವುದಾಗಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ…
ಮೈಸೂರು: ಹುಲಿ ಸೆರೆಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ…
ಮಂಡ್ಯ: ನಂದಿನಿ ಮೊಸರು ಪ್ಯಾಕೆಟ್ನಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿದೆ ಎಂಬ ಪ್ರಕರಣಕ್ಕೆ ಪೊಲೀಸ್ ವಿಚಾರಣೆ ವೇಳೆ ತಿರುವು ಸಿಕ್ಕಿದೆ. ಮೊಸರಿನಲ್ಲಿ…