ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ನಾಳೆ ಮೈಸೂರು ಬಂದ್ ನಿರ್ಧಾರವನ್ನು ಕೈಬಿಟ್ಟಿದ್ದು, 20 ಸಾವಿರಕ್ಕೂ ಹೆಚ್ಚು ಜನರಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತದೆ.
ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಸಮಾಲೋಚನೆ ನಡೆಸಿದ ಬಳಿಕವೇ ಕಾಂಗ್ರೆಸ್ ನಾಯಕರು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸಲು ತೀರ್ಮಾನ ಮಾಡಲಾಗಿದೆ.
ನಾಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಯಲಿದೆ. ಈ ಬಗ್ಗೆ ಶಾಸಕ ಹರೀಶ್ ಗೌಡ ಮಾಹಿತಿ ನೀಡಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ಸರ್ಕಾರ ನಡೆಸುತ್ತಿರುವ ನಾಯಕರೇ ಕಾಂಗ್ರೆಸ್ ಪಕ್ಷದವರಾಗಿರುವ ಕಾರಣ ಶಿಸ್ತಿನಿಂದ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ನಾಳೆ ನಡೆಯುವ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಎಲ್ಲಾ ನಾಯಕರು ಹಾಗೂ ಈ ಭಾಗದ ಶಾಸಕರು ಭಾಗಿಯಾಗಲಿದ್ದು, ಸಿಎಂ ಸಿದ್ದರಾಮಯ್ಯ ಪರ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…