ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ನಿನ್ನೆ ದಸರಾ ಗಜಪಡೆ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ.
ನಿನ್ನೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮೈಸೂರಿಗೆ ಬರಮಾಡಿಕೊಳ್ಳಲಾಯಿತು. ಸಂಜೆ ವೇಳೆಗೆ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನಕ್ಕೆ ಎಂಟ್ರಿಯಾದ ಗಜಪಡೆ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ಬೆಳಿಗ್ಗೆ ಮೈಸೂರು ಅರಮನೆ ಆವರಣ ತಲುಪಲಿವೆ.
ನಾಳೆ ಬೆಳಿಗ್ಗೆ 10.10 ನಿಮಿಷದಿಂದ 10.30ರ ಶುಭ ಗಳಿಗೆಯಲ್ಲಿ ಅರಮನೆ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಎಂಟ್ರಿಕೊಡಲಿದ್ದು, ಗಜಪಡೆಯನ್ನು ಸಾಂಪ್ರದಾಯಿಕವಾಗಿ ಸ್ವಾಗತ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇನ್ನು ಅರಮನೆ ಆವರಣದಲ್ಲಿ ಗಜಪಡೆ, ಕಾವಾಡಿ, ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಆನೆಗಳು ತಂಗಲು ಮತ್ತು ಕಾವಾಡಿ, ಮಾವುತರಿಗೆ ತಾತ್ಕಾಲಿಕ ಟೆಂಟ್ ಮಾಡಲಾಗಿದೆ. ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.
ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಒಂದುವರೆ ತಿಂಗಳಿಗೂ ಮೊದಲೇ ಗಜಪಡೆ ಮೈಸೂರಿಗೆ ಆಗಮಿಸಿವೆ. ದಿನನಿತ್ಯ ಗಜಪಡೆಗೆ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಲು ತಾಲೀಮು ನಡೆಸಲಾಗುತ್ತದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…