ಮೈಸೂರು: ನಾಳೆ ಕೆಎಸ್ಓಯು 20ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಕೆಎಸ್ಓಯು ಮೌಲ್ಯಮಾಪನ ಕುಲಸಚಿವ ಡಾ.ಹೆಚ್. ವಿಶ್ವನಾಥ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಕೆಎಸ್ಓಯು ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮಾ.27ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಕೆಎಸ್ಓಯು ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಅದರಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಸೇರಿದಂತೆ 41 ಜನರಿಗೆ ಪಿಎಚ್‌ಡಿ, 54 ಚಿನ್ನದ ಪದಕಗಳು, 58 ನಗದು ಬಹುಮಾನಗಳನ್ನು ವಿತರಣೆ ಮಾಡಲಾಗುತ್ತದೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಐಡಿಯಲ್ ಎಜುಕೇಷನ್ ಸೊಸೈಟಿ ಛೇರ್ಮನ್ ಸಿ ಎಂ ಇರ್ಫಾನುಲ್ಲಾ ಷರೀಫ್, ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘ ಛೇರ್ಮನ್ ಡಾ ದಾಕ್ಷಾಯಿಣಿ ಎಸ್ ಅಪ್ಪಾರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್, ಕೇಂದ್ರ ಕೌಶಲ್ಯ ಅಭಿವೃದ್ಧಿ ವಾಣಿಜ್ಯೋದ್ಯಮ ಸಚಿವಾಲಯ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ, ಕೆಎಸ್ಓಯು ಕುಲಪತಿ ಪ್ರೊ. ಶರಣಪ್ಪ ವಿ ಹಲಸೆ ಸೇರಿದಂತೆ ಇನ್ನಿತರ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕುಲಪತಿ ಪ್ರೊ. ಶರಣಪ್ಪ ವಿ ಹಲಸೆ, ಕುಲಸಚಿವರಾದ ಡಾ. ಹೆಚ್ ವಿಶ್ವನಾಥ್, ಪ್ರೊ ಕೆ ಬಿ ಪ್ರವೀಣ್ ಉಪಸ್ಥಿತರಿದ್ದರು.