ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚಾಮುಂಡಿಬೆಟ್ಟ ಸೇರಿದಂತೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದಿನಾಂಕ 28-09-2024ರ ಮಧ್ಯರಾತ್ರಿ 12 ಗಂಟೆಯಿಂದ 30-09-2024ರ ಬೆಳಿಗ್ಗೆ 6 ಗಂಟೆಯವರೆಗೆ ಕಲಂ 163 ಬಿಎನ್‌ಎಸ್‌ಎಸ್ ಅಡಿ ನಿಷೇಧಾಜ್ಞೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸಭೆ ಸಮಾರಂಭ, ರ್ಯಾಲಿ ಹಾಗ ಮೆರವಣಿಗೆಗೆ ನಿಷೇಧ ಹೇರಲಾಗಿದ್ದು, ಟೌನ್‌ಹಾಲ್ ಒಳ ಆವರಣ ಹೊರತುಪಡಿಸಿ ಉಳಿದೆಡೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.