Mysore
26
haze

Social Media

ಗುರುವಾರ, 29 ಜನವರಿ 2026
Light
Dark

ದೆಹಲಿ ರೈತರ ಹೋರಾಟಕ್ಕೆ ರಾಜ್ಯ ರೈತ ಸಂಘಟನೆ ಬೆಂಬಲ: ಜನವರಿ.26ರಂದು ಟ್ರ್ಯಾಕ್ಟರ್ ರ್ಯಾಲಿ

ಮೈಸೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಇದೇ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿ ಗಡಿಯಲ್ಲಿ ಅನ್ನದಾತರ ಹಿತಕ್ಕಾಗಿ ಹೋರಾಡುತ್ತಿದ್ದ ದಲೈವಾಲಾ 53 ದಿನಗಳ ಉಪವಾಸ ಕೈಬಿಟ್ಟು ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ನೀಡಿದ್ದಾರೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದರು.

ಇನ್ನು ಬೆಂಬಲ ಬೆಲೆ ಖಾತ್ರಿ, ಕಾನೂನು ಜಾರಿಗಾಗಿ ಒತ್ತಾಯಿಸಿ ದಲೈವಾಲಾ 53 ದಿನದ ಉಪವಾಸ ಸತ್ಯಾಗ್ರಹ ನಿಲ್ಲಿಸಿ ವೈದ್ಯಕೀಯ ಚಿಕಿತ್ಸೆಗೆ ಸಮ್ಮತಿ ಸೂಚಿಸಿದ್ದಾರೆ. ಆದರೆ ಬೇಡಿಕೆ ಈಡೇರುವ ತನಕ ಚಳುವಳಿ ಮುಂದುವರಿಯುತ್ತದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ಕರೆ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿಯೂ ತಾಲ್ಲೂಕು ಜಿಲ್ಲಾ ಮಟ್ಟದಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲಾಗುವುದು ಎಂದು ತಿಳಿಸಿದರು.

Tags:
error: Content is protected !!