ಮೈಸೂರು ನಗರ

ಗಣೇಶ ಹಬ್ಬದ ಪ್ರಯುಕ್ತ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ

ಮೈಸೂರು: ಗಣೇಶ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಆನೆಗಳಿಗೆ ಅರ್ಚಕ ಪ್ರಹ್ಲಾದ್‌ ಜೋಶಿ ಅವರ ನೇತೃತ್ವದಲ್ಲಿ ಕಬ್ಬು, ಬೆಲ್ಲ ಹಾಗೂ ವಿವಿಧ ಬಗೆಯ ಹಣ್ಣುಗಳು, ತಿನಿಸುಗಳನ್ನು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಇನ್ನು ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ದಿನನಿತ್ಯ ತಾಲೀಮಿನಲ್ಲಿ ಭಾಗಿಯಾಗುತ್ತಿದ್ದು, ಜಂಬೂಸವಾರಿ ಮೆರವಣಿಗೆಗೆ ಎಲ್ಲಾ ರೀತಿಯಲ್ಲೂ ತಯಾರಿ ನಡೆಸುತ್ತಿವೆ.

ಇದಕ್ಕಾಗಿಯೇ ದಸರಾ ಗಜಪಡೆಗೆ ಪೌಷ್ಠಿಕ ಆಹಾರ ನೀಡಲಾಗುತ್ತಿದ್ದು, ಎಲ್ಲಾ ಆನೆಗಳು ಆರೋಗ್ಯದಿಂದ ಇವೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಮನೆ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ದಸರೆಯಲ್ಲಿ ಭಾಗವಹಿಸಲು ಕಾಡಿನಿಂದ ಆಗಮಿಸಿರುವ ಎಲ್ಲ ಆನೆಗಳಿಗೂ ವಿಶೇಷ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಪಂಚಫಲ, ಕೋಡುಬಳೆ, ಒಬ್ಬಟ್ಟು, ರವೆ ಉಂಡೆ, ಸಿಹಿಗಡುಬು, ಕರ್ಜಿಕಾಯಿ, ಲಾಡು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು, ಕಲ್ಲು ಸಕ್ಕರೆ, ಮೋದಕ ಮೊದಲಾದ ಗಣೇಶನ ಇಷ್ಟದ ತಿನಿಸುಗಳನ್ನು ಗಜಪಡೆಗೆ ನೀಡಲಾಯಿತು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

14 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

21 hours ago