ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ಚರಿ ಸಭಾಂಗಣದಲ್ಲಿ ಜನ ಸುನ್ವಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳೆಯರು ಯಾವುದೇ ರೀತಿಯ ತೊಂದರೆ ಉಂಟಾದರು ನಿರ್ಭಯವಾಗಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ಸಲ್ಲಿಸುವಂತಾಗಬೇಕು ಎಂದರು.
ಕಟ್ಟಕಡೆಯ ಮಹಿಳೆಗೂ ನ್ಯಾಯ ಒದಗಿಸುವುದು ಆಯೋಗದ ಉದ್ದೇಶವಾಗಿದೆ. ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಇಲಾಖೆ ವತಿಯಿಂದ ನಡೆಸಲಾಗುವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.
ಮಹಿಳೆಯರು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಸೌಜನ್ಯದಿಂದ ವರ್ತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ. ಮಹಿಳೆಯರು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಅನುಚಿತ ವರ್ತನೆ ಕಂಡುಬಂದಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ತಪ್ಪದೇ ದೂರು ಸಲ್ಲಿಸಿ ಎಂದರು.
ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪಾಷ್ (posch) ಸಮಿತಿ ಇದೆ. ಸಮಿತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಇದರ ಅನುಷ್ಠಾನ ಕುರಿತು ಪರಿಶೀಲನೆ ನಡೆಸುವಂತೆ ತಿಳಿಸಿದರು.
ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಮಾತನಾಡಿ, ಪೊಲೀಸ್ ಇಲಾಖೆಯಿಂದ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಣ್ಣು ಮಕ್ಕಳು ಯಾವುದಾದರೂ ಶೋಷಣೆಗೆ ಒಳಗಾದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಂದರು.
ಹೆಣ್ಣು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ ಎಂಬ ಪೊಲೀಸ್ ಇಲಾಖೆ ವಾಹನವು ಮುಖ್ಯವಾಗಿ ಕಾಲೇಜುಗಳು, ತೊಂದರೆ ಇರುವ ಸ್ಥಳಗಳಲ್ಲಿ ಹೆಚ್ಚು ಗಸ್ತು ಮಾಡಲಾಗುತ್ತದೆ. ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಸಾಗಣಿಕೆಯನ್ನು ತಡೆಗಟ್ಟಲು ವಿಮುಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ: ಪಿ ಶಿವರಾಜು, ಎಸಿಪಿ ಗಂಗಧಾರಸ್ವಾಮಿ, ಎ.ಎಸ್.ಪಿ ನಾಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…