ಮೈಸೂರು ನಗರ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಮಾಜಿ ಸಿಎಂ ಎಸ್‌.ಎಂ.ಕೃಷ್ಣಗೆ ನುಡಿನಮನ

ಮೈಸೂರು: ಇಲ್ಲಿನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೇಗೆ ನಿಧನರಾದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರಿಗೆ ಪುಷ್ಪಾರ್ಚನೆ ನುಡಿ ನಮನ ಸಲ್ಲಿಸಲಾಯಿತು.

ನಗರದ ಪತ್ರಕರ್ತರ ಭವನದಲ್ಲಿ ಇಂದು(ಡಿಸೆಂಬರ್‌.16) ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಎಸ್‌.ಎಂ.ಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈ ವೇಳೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಅವರು ಮಾತನಾಡಿ, ಎಸ್.ಎಂ.ಕೃಷ್ಣ ಅವರು ಮೈಸೂರು ಹಾಗೂ ಮೈಸೂರು ಪತ್ರಕರ್ತರಿಗೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಅಲ್ಲದೇ ಅವರು ಜಿಲ್ಲೆಯ 100 ಜನ ಪತ್ರಕರ್ತರಿಗೆ ನಿವೇಶನಗಳನ್ನು ಒದಗಿಸಿದ್ದರು ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡ ಎಚ್‌.ಎ.ವೆಂಕಟೇಶ್‌ ಭಾಗವಹಿಸಿ ಎಸ್‌.ಎಂ.ಕೃಷ್ಣ ಅವರೊಂದಿಗಿನ ಒಡನಾಟ, ಅವರ ವ್ಯಕ್ತಿತ್ವ ಮತ್ತು ಅನುಭವವನ್ನು ಹಂಚಿಕೊಂಡರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್‌, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್‌ ಸೇರಿದಂತೆ ಇನ್ನಿತರ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಅರ್ಚನ ಎಸ್‌ ಎಸ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

41 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

56 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

2 hours ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago