ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ.
ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆ ತಂದಿದ್ದ ಬಸ್ ಪಲ್ಟಿಯಾಗಿದೆ. ಮೈಸೂರಿನ ಪವನ್(15) ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳು ವಿದ್ಯಾರ್ಥಿಗಳನ್ನು ಹೊನ್ನಾವರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನು ಪ್ರವಾಸಕ್ಕೆ ತೆರಳಿದ್ದ ಮಕ್ಕಳು ಇಂದು ಸಂಜೆಯ ವೇಳೆಗೆ ಮೈಸೂರಿಗೆ ಆಗಮಿಸುವ ಸಾಧ್ಯತೆಯಿದೆ. ಪೊಲೀಸರ ಮಾಹಿತಿ ಪ್ರಕಾರ ಪೋಸ್ಟ್ ಮಾರ್ಟಮ್ ಆದ ನಂತರದಲ್ಲಿ ಎಲ್ಲಾ ಮಕ್ಕಳು ಅಲ್ಲಿಂದ ಹೊರಡುತ್ತಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಸದ್ಯ ಶಾಲೆಯ ಮುಂಭಾಗ ಪೋಷಕರು ಆಗಮಿಸಿದ್ದಾರೆ.





