ಮೈಸೂರು ನಗರ

ಜನ ಮೆಚ್ಚುಗೆ ಪಡೆದ ಹಗ್ಗ-ಜಗ್ಗಾಟ : ಸಂಸದ ಯದುವೀರ್‌ ಅವರ ʼಫಿಟ್ ಯುವ ಫಾರ್ ವಿಕಸಿತ ಭಾರತʼ ಯೋಜನೆಯಡಿ ಆಯೋಜನೆ

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ-ಜಗ್ಗಾಟ ಯಶಸ್ಸಿನ ಜತೆಗೆ ಆಕರ್ಷಣೆ ಪಡೆದಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಓವಲ್ ಗೌಂಡ್‌ನಲ್ಲಿ ಸಂಸದರ ಕ್ರೀಡಾ ಮಹೋತ್ಸವದ ‘ಫಿಟ್ ಯುವ ಫಾರ್ ವಿಕಸಿತ ಭಾರತ’ದ ಯೋಜನೆಯಡಿ ಆಯೋಜಿಸಲಾಗಿದ್ದ ಹಗ್ಗ-ಜಗ್ಗಾಟ ಕ್ರೀಡೆ ಉದ್ಘಾಟಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಹಳ್ಳಿ ಸೊಗಡಿನ ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಇಷ್ಟೊಂದು ಜನರು ಭಾಗವಹಿಸಿರುವುದು ಖುಷಿ ತಂದಿದ್ದು, ಇದೊಂದು ಕ್ರೀಡಾಸಂಗಮ ಎಂದು ಯದುವೀರ್ ತಿಳಿಸಿದರು.

ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಚಂದ್ರಕಲಾ ಮಾತನಾಡಿ, ಈ ರೀತಿಯ ಪಂದ್ಯಗಳು ಆಯೋಜನೆಗೊಂಡಿದ್ದು ಸಂತಸ ತಂದಿದೆ ಎಂದು ಸಂತಸ ಹಂಚಿಕೊಂಡರು.

ಮೈಸೂರು 263 ಪೊಲೀಸ್ ತಂಡದ ಶಿವಕುಮಾ‌ರ್, ಇಂಥ ಕ್ರೀಡಾಕೂಟಗಳು ನಿರಂತರವಾಗಿ ನಡೆದರೆ ಸ್ಥಳೀಯ ಪ್ರತಿಭೆಗಳಿಗೆ” ಅವಕಾಶ ದೊರಕುತ್ತದೆ ಎಂದು ತಿಳಿಸಿದರು.

ಇದನ್ನು ಓದಿ : 2030ರೊಳಗೆ ಎಚ್‌ಐವಿ ನಿರ್ಮೂಲನೆಗೆ ಗುರಿ : ಸಚಿವ ದಿನೇಶ್‌ ಗುಂಡೂರಾವ್‌

ಸಂಸದ ಯದುವೀರ್ ಒಡೆಯರ್ ಅವರ ನೇತೃತ್ವದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇದು ಹೀಗೆಯೇ ಮುಂದುವರಿಯಲಿ ಎಂದು ಮೈಸೂರು ಪ್ಯಾಂಥರ್ಸ್‌ನ ರಮೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಪಂದ್ಯಾವಳಿಯಲ್ಲಿ 35ಕ್ಕೂ ಹೆಚ್ಚು ತಂಡಗಳು ಹಾಗೂ 300ಕ್ಕೂ ಹೆಚ್ಚು ಕ್ರೀಡಾಳುಗಳು ಭಾಗವಹಿಸಿದ್ದರು. ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಶಾಸಕ ನಾಗೇಂದ್ರ, ಹಾಗೂ ನಿಖಿಲೇಶ್, ಕೇಬಲ್ ಮಹೇಶ್, ದಿನೇಶ್ ಗೌಡ, ರಾಕೇಶ್ ಭಟ್, ಪೈಲ್ವಾನ್ ರವಿ, ಗೋಪಾಲ್ ಅರಸು ಉಪಸ್ಥಿತರಿದ್ದರು.

ಬಹುಮಾನ ವಿಜೇತರು : 

ಪುರುಷರ ವಿಭಾಗ
560 ಕೆಜಿಗಿಂತ ಕಡಿಮೆ ವಿಭಾಗದಲ್ಲಿ ಮೈಸೂರು ಪ್ಯಾಂಥರ್ಸ್ ಪ್ರಥಮ, ಯದುವೀರ್ ಬ್ರಿಗೇಡ್ ದ್ವಿತೀಯ ಸ್ಥಾನ ಪಡೆಯಿತು. 640 ಕೆಜಿಗಿಂತ ಕಡಿಮೆ ವಿಭಾಗದಲ್ಲಿ ಫೈರ್ ಫೈಟರ್ಸ್ ಪ್ರಥಮ, ಮೈಸೂರು ಸಿಟಿ ಪೊಲೀಸ್ ತಂಡ ಎರಡನೇ ಸ್ಥಾನ ಗಳಿಸಿದೆ. 720 ಕೆಜಿಗಿಂತ ಕಡಿಮೆ ತೂಕದ ವಿಭಾಗದಲ್ಲಿ ಮೈಸೂರು ಟೈಗರ್ ಪ್ರಥಮ, ಸಿಎಫ್‌ಒ ಝನ್ ಮೈಸೂರು ಫೈರ್ ಎರಡನೇ
ಸ್ಥಾನ ಗಿಟ್ಟಿಸಿಕೊಂಡಿದೆ.

ಮಹಿಳೆಯರ ವಿಭಾಗ
500 ಕೆಜಿ ಗಿಂತ ಕಡಿಮೆ ವಿಭಾಗದಲ್ಲಿ ಮಾರಮ್ಮಕೊಡಗು ತಂಡ, ಮೈಸೂರು ಬಿಜೆಪಿ ಮಹಿಳಾ ಮೋರ್ಚಾ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಪಡೆದವು. 540 ಕೆಜಿಗಿಂತ ಕಡಿಮೆ ತೂಕದ ವಿಭಾಗದಲ್ಲಿ ಕೂರ್ಗ್ ವಿಂಗ್ಸ್ ಪ್ರಥಮ ಹಾಗೂ ರೈನ್ ಬೋ ವಾರಿಯರ್ಸ್ ತಂಡ ಎರಡನೇ ಸ್ಥಾನ ಪಡೆಯಿತು. ಪ್ರತಿ ವಿಭಾಗದಲ್ಲಿ ವಿಜೇತ ತಂಡಗಳಿಗೆ ಟ್ರೋಫಿ, ಪದಕ, ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟ ಉಳಿಸಿ: ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…

7 mins ago

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ: ಎಂಎಲ್‌ಸಿ ರಾಜೇಂದ್ರ ರಾಜಣ್ಣ

ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…

55 mins ago

ಧರ್ಮಸ್ಥಳ ಬುರುಡೆ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರ ಎಫ್‌ಎಸ್‌ಎಲ್‌ಗೆ ರವಾನೆ

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…

1 hour ago

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…

2 hours ago

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

2 hours ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

2 hours ago