ಮೈಸೂರು: ವಿವಾದಿತ ಪೋಸ್ಟ್‌ಗೆ ಸಂಬಂದಿಸಿದಂತೆ ಉದಯಗಿರಿ ಪೊಲೀಸ್ ಠಾಣೆ ಹತ್ತಿರ ನಡೆದಿದ್ದ ಗಲಾಟೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಜನಜಾಗೃತಿ ಸಭೆಗೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ನಿಷೇಧಾಜ್ಞೆ ಜಾರಿ ವಿರೋಧಿಸಿ ಬಿಜೆಪಿ ಪಕ್ಷ ಹೈಕೋರ್ಟ್ ಮೊರೆ ಹೋಗಿದ್ದು, ಒಂದು ವೇಳೆ ಅನುಮತಿ ಸಿಕ್ಕರೆ ಬಿಜೆಪಿ ಮತ್ತೊಮ್ಮೆ ಮೈಸೂರು ಚಲೋ ನಡೆಸಲಿದೆ.
ಈ ಕುರಿತು ಸಮಿತಿಯ ಸಂಚಾಲಕ ಮಹೇಶ್ ಕಡಗದಾಳು ಮಾತನಾಡಿ. ಬಂಧಿತ ಆರೋಪಿಗಳ ಮೇಲೆ ಯುಎಪಿಎ (UAPA) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಈ ಹಿನ್ನಲೆ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯಿಂದ ಜನಜಾಗೃತಿ ಸಭೆ ಮಾಡಲಾಗುತ್ತಿತ್ತು. ಆದರೆ, ಸಭೆಗೆ ಅನುಮತಿ ನಿರಾಕರಿಸಿರುವುದರಿಂದ ನಿಶ್ಚಿತ ಸ್ಥಳದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಇನ್ನು ನಾಳೆಯ ಜನಾಂದೋಲನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಗಲಾಟೆಗೆ ಬಿಜೆಪಿ, ಆರ್‌ಎಸ್‌ಎಸ್ ಕಾರಣವೆಂದು ಕೆಲ ಸಂಘಟನೆಗಳು ಜನಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು. ಜೊತೆಗೆ ಈ ಕಾರ್ಯಕ್ರಮಗಳ ಆಯೋಜನೆಯು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತವೆ ಎಂದು ಪೊಲೀಸರು ಅನುಮತಿಗೆ ನಿರಾಕರಿಸಿದ್ದಾರೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…