ಮೈಸೂರು: ವಿವಾದಿತ ಪೋಸ್ಟ್‌ಗೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ಗಲಾಟೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿನನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಗಲಾಟೆಗೆ ಪ್ರಚೋದನೆ ನೀಡಿದ್ದ ಮೌಲ್ವಿಯನ್ನು ಬಂಧಿಸದಿದ್ದಕ್ಕೆ ರಾಜ್ಯಾದ್ಯಾಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರದ ನಡೆಯನ್ನು ಖಂಡಿಸಿದ್ದ ಬಿಜೆಪಿ ನಾಯಕರಾದ ಪ್ರತಾಪ್ ಸಿಂಹ, ವಿಪಕ್ಷ ನಾಯಕ ಆರ್. ಅಶೋಕ್, ಇನ್ನಿತರರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದರು.
ಇದರಿಂದ ಒತ್ತಡಕ್ಕೆ ಓಳಗಾಗಿದ್ದ ರಾಜ್ಯ ಸರ್ಕಾರ ಹಾಗೂ ಪೊಲೀಸರು ಕೊನೆಗೂ 11 ದಿನಗಳ ಬಳಿಕ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.





