ಮೈಸೂರು ನಗರ

ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣ: 1000ಕ್ಕೂ ಹೆಚ್ಚು ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್‌

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂದೆ ಗಲಭೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ್ದ ಸಾವಿರಕ್ಕೂ ಅಧಿಕ ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಗಲಭೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಇದ್ದರು ಎಂದು ಹೇಳಿದ್ದಾರೆ.

ವಿವಾದಿತ ಪೋಸ್ಟ್‌ ಹಾಕಿದ್ದ ಆರೋಪಿಯನ್ನು ಬಂಧಿಸಿ ಠಾಣೆಯಲ್ಲಿ ಇರಿಸಲಾಗಿತ್ತು. ಆದರೆ ಫೆಬ್ರವರಿ.9ರಂದು ಆರೋಪಿ ಸತೀಶ್‌ ಎಂಬಾತನನ್ನು ಠಾಣೆಗೆ ಕರೆತರಲಾಗಿತ್ತು. ಬಳಿಕ ಅಂದು ರಾತ್ರಿ ಠಾಣೆ ಮುಂದೆ ಜಮಾಯಿಸಿದ ಅನ್ಯಕೋಮಿನ ಯುವಕರು ಆರೋಪಿಯನ್ನು ನಮ್ಮ ವಶಕ್ಕೆ ಕೊಡಿ, ನಮ್ಮ ಧರ್ಮದ ಬಗ್ಗೆ ಮಾತನಾಡಿದ್ದಾನೆ ಎಂದು ಕೂಗಾಟ ಆರಂಭಿಸಿದ್ದರು.

ಬಳಿಕ ಸಾವಿರ ಜನರ ಗುಂಪೊಂದು ಠಾಣೆ ಮುಂದೆ ಜಮಾವಣೆ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೂಗಾಟ ಮಾಡಿದ್ದರು.

ಈ ವೇಳೆ ಪೊಲೀಸರು ಎಷ್ಟೇ ಹೇಳಿದರೂ ಕೇಳದ ಗುಂಪು, ಠಾಣೆ ಹಾಗೂ ವಾಹನಗಳ ಮೇಲೆ ಏಕಾಏಕಿ ಕಲ್ಲಿನ ದಾಳಿ ನಡೆಸಿದರು. ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇನ್ನು ಕಲ್ಲು ತೂರಾಟದಿಂದ ಸಾರ್ವಜನಿಕರಿಗೂ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಘಟನೆ ನಡೆಯುತ್ತಿದ್ದಂತೆ ಹೆಚ್ಚಿನ ಅನಾಹುತ ಸಂಭವಿಸದಂತೆ ಉದಯಗಿರಿ ಠಾಣೆ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿತ್ತು. ಈಗ ಪರಿಸ್ಥಿತಿ ಶಾಂತವಾಗಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

7 mins ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

34 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

1 hour ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

1 hour ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

2 hours ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago