ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಯನ್ನುಕಡೆಗೂ ಬಂಧಿಸಲಾಗಿದೆ.
ಘಟನೆಗೂ ಮುನ್ನಾ ಪ್ರಚೋದನಾಕಾರಿ ಭಾಷಣ ಮಾಡಿದ್ದ ರಾಜೀವ್ ನಗರ ನಿವಾಸಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಅಂದಿನಿಂದ ತಲೆಮರೆಸಿಕೊಂಡಿದ್ದರು. ಅಂದು ಆತ ಮಾಡಿದ್ದ ಭಾಷಣ ಎಲ್ಲೆಡೆ ವೈರಲ್ ಆಗಿತ್ತು. ಹೀಗಾಗಿ ಆತನ ಬಂಧನಕ್ಕೆ ಹೆಚ್ಚಿನ ಒತ್ತಡವಿತ್ತು.
ಆತನ ಬಂಧನಕ್ಕೆ ಸಿಸಿಬಿ ಪೊಲೀಸರು ತಂಡ ರಚನೆ ಮಾಡಿದ್ದರು. ಪೊಲೀಸರ ಸತತ ಕಾರ್ಯಾಚರಣೆ ಬೆನ್ನಲ್ಲೇ ಗುರುವಾರ ಮುಂಜಾನೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಆತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸದ್ಯ ಆರೋಪಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಆತನನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಒಪ್ಪಿಸಿದೆ.
ಇನ್ನು ವಿವಾದಿತ ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿ ಸತೀಶ್ ಎಂಬಾತನನ್ನು ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಅರೋಪಿಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಿಡುಗಡೆ ಬಳಿಕ ಗಡಿಪಾರಿಗೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ನವದೆಹಲಿ: ವಿದ್ಯಾರ್ಹತೆ, ತರಬೇತಿ ಇಲ್ಲದ ವೈದ್ಯಕೀಯ ವೃತ್ತಿಪರರ ನಕಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ.…
ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಚಿವರ ಕರೆ ಬೆಂಗಳೂರು: ದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ…
ಮಂಡ್ಯ: ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಳವಳ್ಳಿಯ ಖಾಸಗಿ ವಸತಿ ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಅವರು ವಿಚಾರಿಸಿದರು.…
ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ…
ಮಂಡ್ಯ : ಕಂಕಣ ಭಾಗ್ಯಕ್ಕಾಗಿ ರೈತ ಯುವಕರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ರೈತ…
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ ಕೋಮುದ್ವೇಷಕ್ಕೆ ಕಾರಣರಾದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾರ್ಚ್…