ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಆದರೆ ಅಮಾಯಕರಿಗೆ ತೊಂದರೆ ಆಗಬಾರದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್ ಸೇಠ್ ಅವರು, ಪೊಲೀಸ್ ಇಲಾಖೆ ಅಂದೇ ರಾತ್ರಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಬಾರದು. ಈಗ ಉದಯಗಿರಿ ಸಹಜ ಸ್ಥಿತಿಗೆ ಬಂದಿದೆ. ಯಾರೇ ತಪ್ಪು ಮಾಡಿದ್ದರೂ ಕಾನೂನಿನಡಿ ಕ್ರಮ ಜರುಗಿಸಲಾಗುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ. ಆದರೆ ಒಂದು ಮಾತು ಹೇಳುತ್ತೇನೆ. ಅಮಾಯಕರಿಗೆ ತೊಂದರೆ ಆಗಬಾರದು. ಈ ಘಟನೆಗೆ ಮೂಲ ಕಾರಣ ಯಾರು. ಆ ಪೋಸ್ಟ್ ಹಾಕಿದ್ದು ಯಾರು? ಸಿದ್ಧಪಡಿಸಿದ್ದು ಯಾರು? ಅಂತಹವರನ್ನು ಪತ್ತೆ ಹಚ್ಚಿ ಎಂದು ಹೇಳಿದ್ದೇನೆ ಎಂದರು.
ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕಾಗಿ ಗಲಾಟೆ ವಿಕೋಪಕ್ಕೆ ತಿರುಗಿದೆ. ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪಾಗಿದೆ. ತಪ್ಪು ಮಾಡಿರುವ ಆರೋಪಿಗಳ ವಿರುದ್ಧ ಕ್ರಮ ಆಗುತ್ತದೆ ಎಂದು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…