ಮೈಸೂರು ನಗರ

ಯುಗಾದಿ ಭರಾಟೆ: ನಗರದಲ್ಲಿ ಟ್ರಾಫಿಕ್‌ ಕಿರಿಕಿರಿ

ಮೈಸೂರು: ಹಿಂದೂಗಳ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಾಗೂ ಪವಿತ್ರ ರಂಜಾನ್‌ ಹಬ್ಬದ ರಜೆ ಹಿನ್ನಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆಯಾಗಿ ಸಾರ್ವಜನಿಕರು ಪರದಾಡಿದರು.

ನಗರದ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣ, ನಗರ ಬಸ್‌ ನಿಲ್ದಾಣ, ದೇವರಾಜ ಅರಸು ರಸ್ತೆ, ರಾಮಸ್ವಾಮಿ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದ ಸಾರ್ವಜನಿಕರು ಕಿರಿ ಕಿರಿ ಅನುಭವಿಸಿದರು.

ಹಬ್ಬದ ಖರೀದಿ ಭರಾಟೆ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆ, ವಾಣಿ ವಿಲಾಸ ಮಾರುಕಟ್ಟೆ, ಹೂ-ಹಣ್ಣು, ತರಕಾರಿ, ಬೇವು-ಸೊಪ್ಪನ್ನು ಖರೀದಿಸಲು ಜನ ಮುಗಿ ಬಿದ್ದ ಕಾರಣ ರಸ್ತೆಗಳಲ್ಲಿ ವಾಹನಗಳು ನಿಂತುಕೊಂಡಿದ್ದವು.

ಜೊತೆಗೆ ರಾಜ್ಯ ರಾಜಧಾನಿ ಸೇರಿದಂತೆ ಹಲವು ಕಡೆಯಿಂದ ಮೈಸೂರಿನತ್ತ ಸಾರ್ವಜನಿಕರು ಧಾವಿಸಿದ್ದರಿಂದ ಕಾಲಿಡಲು ಸಾಧ್ಯವಿಲ್ಲದಷ್ಟು ವಾಹನ ದಟ್ಟನೆ ಉಂಟಾಯಿತು. ಟ್ರಾಫಿಕ್‌ ಪೊಲೀಸರು ಸಂಚಾರ ನಿಯಂತ್ರಿಸಲು ಪರದಾಡಿದರು.

ಗ್ರಾಮೀಣ ಬಸ್‌ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್‌ ಆಗಿದ್ದ ದೃಶ್ಯಗಳು ಕಂಡು ಬಂದವು.

ಆಂದೋಲನ ಡೆಸ್ಕ್

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

5 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

6 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

6 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

6 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

6 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

6 hours ago