ಮೈಸೂರು: ಹಿಂದೂಗಳ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಾಗೂ ಪವಿತ್ರ ರಂಜಾನ್ ಹಬ್ಬದ ರಜೆ ಹಿನ್ನಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆಯಾಗಿ ಸಾರ್ವಜನಿಕರು ಪರದಾಡಿದರು.
ನಗರದ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣ, ದೇವರಾಜ ಅರಸು ರಸ್ತೆ, ರಾಮಸ್ವಾಮಿ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದ ಸಾರ್ವಜನಿಕರು ಕಿರಿ ಕಿರಿ ಅನುಭವಿಸಿದರು.
ಹಬ್ಬದ ಖರೀದಿ ಭರಾಟೆ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆ, ವಾಣಿ ವಿಲಾಸ ಮಾರುಕಟ್ಟೆ, ಹೂ-ಹಣ್ಣು, ತರಕಾರಿ, ಬೇವು-ಸೊಪ್ಪನ್ನು ಖರೀದಿಸಲು ಜನ ಮುಗಿ ಬಿದ್ದ ಕಾರಣ ರಸ್ತೆಗಳಲ್ಲಿ ವಾಹನಗಳು ನಿಂತುಕೊಂಡಿದ್ದವು.
ಜೊತೆಗೆ ರಾಜ್ಯ ರಾಜಧಾನಿ ಸೇರಿದಂತೆ ಹಲವು ಕಡೆಯಿಂದ ಮೈಸೂರಿನತ್ತ ಸಾರ್ವಜನಿಕರು ಧಾವಿಸಿದ್ದರಿಂದ ಕಾಲಿಡಲು ಸಾಧ್ಯವಿಲ್ಲದಷ್ಟು ವಾಹನ ದಟ್ಟನೆ ಉಂಟಾಯಿತು. ಟ್ರಾಫಿಕ್ ಪೊಲೀಸರು ಸಂಚಾರ ನಿಯಂತ್ರಿಸಲು ಪರದಾಡಿದರು.
ಗ್ರಾಮೀಣ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ ಆಗಿದ್ದ ದೃಶ್ಯಗಳು ಕಂಡು ಬಂದವು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…