ಮೈಸೂರು ನಗರ

ಯುಜಿಸಿ ನೆಟ್-ಕೆಸೆಟ್‌ ಪರೀಕ್ಷೆಗೆ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ.

ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು 30 ರೊಳಗಾಗಿ ಬೆಳಗ್ಗೆ 10ರಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನ್‌ಕುಮಾರ್ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

9 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

11 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

12 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

13 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

14 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

15 hours ago