ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು 30 ರೊಳಗಾಗಿ ಬೆಳಗ್ಗೆ 10ರಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನ್‌ಕುಮಾರ್ ತಿಳಿಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…