ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅರಮನೆ ಮುಂಭಾಗದ ಚಾಮರಾಜೇಂದ್ರ ವೃತ್ತದ ಫುಟ್ ಪಾತ್ ಬಳಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲಾಗುತ್ತಿದೆ. ಈ ರಸ್ತೆಯಲ್ಲಿ ನಿತ್ಯ ಸಾವಿರಾರು ಮಂದಿ ಓಡಾಟ ನಡೆಸುತ್ತಿದ್ದು, ಫುಟ್ ಪಾತ್ ಇಲ್ಲದ ಕಾರಣ ಪಾದಚಾರಿಗಳು ರಸ್ತೆಗಿಳಿಯುತ್ತಿರುವ ಪರಿಸ್ಥಿತಿ ಎದುರಾಗಿದೆ.
ಕೇಂದ್ರ ಸರ್ಕಾರದ ಸ್ವದೇಶ್ 2.0 ಯೋಜನೆಯಡಿ ಈಗಾಗಲೇ ಪಾಲಿಕೆಯು ಫುಟ್‌ಪಾತ್ ಬ್ಲಾಕ್ ಮಾಡಿ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದು, ನಗರದ ಹೃದಯ ಭಾಗದಲ್ಲಿರುವ ಸ್ಥಳದಲ್ಲಿ ಟಾಂಗಾ ಸ್ಟ್ಯಾಂಡ್ ನಿರ್ಮಾಣದ ಅವಶ್ಯಕತೆ ಇತ್ತ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.
ಯಾವುದೇ ಕಾರಣಕ್ಕೂ ಇಲ್ಲಿ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಬಾರದು. ಪಾರಂಪರಿಕ ನಗರಿಗೆ ಇದು ಕಳಂಕ ವಿದ್ದಂತೆ. ಟಾಂಗ ಸ್ಟ್ಯಾಂಡ್ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ ಈ ಸ್ಥಳ ಬಿಟ್ಟು ಬೇರೆಡೆ ನಿರ್ಮಾಣ ಮಾಡಲಿ ಎಂದು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…