ಮೈಸೂರು ನಗರ

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಾಯಿಸುವ ಕಾಮಗಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಪರಿಶೀಲಿಸಿದರು.

ಮೈಸೂರಿನ ಶ್ರೀರಾಂಪುರದಲ್ಲಿ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆಸ್ಕ್‌ ಅಧಿಕಾರಿಗಳಿಂದ ಕಾಮಗಾರಿಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಸೆಸ್ಕ್‌ನ ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್‌ ಸುನೀಲ್‌ ಕುಮಾರ್‌ ಅವರು, ಮೈಸೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿಯ ಪ್ರಗತಿ ಕುರಿತಂತೆ ಮಾಹಿತಿ ನೀಡಿದರು.

“ಮೈಸೂರು ನಗರ ವ್ಯಾಪ್ತಿಯಲ್ಲಿ(ರಿಂಗ್ ರೋಡ್ ಒಳ ಭಾಗದಲ್ಲಿ) ಒಟ್ಟು 588.24 ಕೋಟಿ ರೂ. ವೆಚ್ಚದಲ್ಲಿ ಸದರಿ ಕಾಮಗಾರಿ ಕೈಗೊಳ್ಳಲಾಗಿದ್ದು, 871.09 ಕಿ.ಮೀ ವ್ಯಾಪ್ತಿಯಲ್ಲಿನ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಾಯಿಸುವ ಕೆಲಸ ನಡೆಸಲಾಗುತ್ತಿದೆ. ಇದಕ್ಕಾಗಿ 474 ಆರ್‌.ಎಂ.ಯು ಮತ್ತು 11 ಸಿ.ಎಸ್‌.ಎಸ್‌. ಅಳವಡಿಸಲು ಉದ್ದೇಶಿಸಲಾಗಿದ್ದು, ಕಾಮಗಾರಿಯನ್ನು 4 ವಿವಿಧ ಗುತ್ತಿಗೆದಾರರಿಗೆ ವಹಿಸಲಾಗಿದೆ. ಪ್ರಸ್ತುತ 227.12 ಕಿ.ಮೀ ವ್ಯಾಪ್ತಿಯಲ್ಲಿ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಮುಗಿದಿದ್ದು, 160 ಆರ್‌ಎಂಯು ಅಳವಡಿಸುವ ಮೂಲಕ ಶೇ. 26.07 ಪ್ರಗತಿ ಸಾಧಿಸಲಾಗಿದೆ. ಕಾಮಗಾರಿ ಮುಗಿಸಲು 2 ವರ್ಷ ಅವಧಿ ನಿಗದಿಪಡಿಸಿದ್ದು, ನಿಗದಿತ ವೇಳೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ,” ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್‌.ಸಿ. ಮಹದೇವಪ್ಪ, ಶಾಸಕರಾದ ಟಿ.ಎಸ್‌. ಶ್ರೀವತ್ಸ, ಕೆ. ಹರೀಶ್‌ ಗೌಡ, ವಿಧಾನ ಪರಿಷತ್‌ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪ್ರಾದೇಶಿಕ ಆಯುಕ್ತರು ಹಾಗೂ ಸೆಸ್ಕ್‌ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ನಿತೀಶ್‌ ಪಾಟೀಲ್‌, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌, ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌, ಸೆಸ್ಕ್‌ನ ಮುಖ್ಯ ಇಂಜಿನಿಯರ್‌ ಎಲ್‌. ಲೋಕೇಶ್‌ ಸೇರಿದಂತೆ ಇತರರಿದ್ದರು.

ಯೋಜನೆಯ ಅನುಕೂಲಗಳು:
ಮೈಸೂರು ನಗರ ವ್ಯಾಪ್ತಿಯಲ್ಲಿ ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಾಯಿಸುವ ಕಾಮಗಾರಿಯಿಂದ ಹೆಚ್ಚಿನ ವಿಶ್ವಾಸಾರ್ಹತೆ, ಕಡಿಮೆ ನಿರ್ವಹಣಾ ವೆಚ್ಚ, ಕಡಿಮೆ ವಿದ್ಯುತ್ ಅಡಚಣೆ, ನಗರದ ಸೌಂದರ್ಯ ಹೆಚ್ಚಿಸುವಿಕೆ, ಕಡಿಮೆ ಮರ ಕತ್ತರಿಸುವಿಕೆ, ದೀರ್ಘ ಆಯುಷ್ಯ, ಕಡಿಮೆ ವಿದ್ಯುತ್ ಅಪಘಾತಗಳು ಹಾಗೂ ಸುಧಾರಿತ ವ್ಯವಸ್ಥೆಯ ಸಾಮರ್ಥ್ಯದ ಪ್ರಯೋಜನವಾಗಲಿದೆ.

ಆಂದೋಲನ ಡೆಸ್ಕ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

6 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

6 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

7 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

7 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

7 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

7 hours ago