ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆ ರೀತಿ ವರ್ತಿಸುತ್ತಾರೆ. ನಾನು ಸತ್ಯ ಹೇಳುತ್ತೇನೆ ಕೇಳಿ, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಹೆಚ್ಚಾಗಿದೆ ಎಂಬುದನ್ನು ಅವರನ್ನೇ ಕೇಳಬೇಕು. ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚಾರ ಆರಂಭಿಸಿರುವುದು ದುರಂತ ಎಂದು ಹೇಳಿದರು.
ಇನ್ನು ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಮಾತನಾಡಿದ ಅವರು, ಯುದ್ಧ ಸಂಪೂರ್ಣ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನು ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದ್ರೆ ಎಲ್ಲರೂ ಬಹುಬೇಗ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ. ದುಬೈನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಸಾಧ್ಯವಾದಷ್ಟು ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರವು ಕೂಡ ಎಲ್ಲಾ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.
ಎಂದು ಹೇಳಿದರು.
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜುಂಡೇಶ್ವರನ ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ…
ಮಂಡ್ಯ: ಅಮೆರಿಕಾ- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಕ್ರಿಸ್ತರಾಜ ಶಾಲೆಯ ಶಿಕ್ಷಕ ಮನೋಜ್ ಕುಮಾರ್.ಪಿ. ಅವರು ರಾಷ್ಟ್ರೀಯ…