Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸರ್ಕಾರದ ಪರ ಬ್ಯಾಟ್‌ ಬೀಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿವಿಗಳನ್ನು ಮುಚ್ಚಲು ಮುಂದಾಗಿರುವುದು ಒಳ್ಳೆಯ ನಿರ್ಧಾರ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ಫಿಕ್ಸ್ ಮಾಡಿದ್ದೇ ಈ ಹಿಂದಿನ ಬಿಜೆಪಿ ಸರ್ಕಾರ. ಅದು ಈಗಲೂ ಮುಂದುವರಿದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ಹಲವು ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ರಾಜ್ಯದಲ್ಲಿಗ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಇಲ್ಲದಂತಾಗಿದೆ ಎಂದರು.

ಇನ್ನು ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್‌ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ.
ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು.

ಇನ್ನು ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣ ಪುಟ್ಟ ಘಟನೆ ಹೊರತು ಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚನ್ನಾಗಿದೆ. ಒಂದು ಮನೆ ನಡೆಸೋದೇ ಕಷ್ಟ. ಕೋಟ್ಯಾಂತರ ಜನರು ಭಾಗಿಯಾಗಿರುವ ಕುಂಭಮೇಳ ಯಶಸ್ವಿಯಾಗಿ ‌ನಡೆಯುತ್ತಿದೆ. ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿದೆ ಎಂದು ಉತ್ತರಪ್ರದೇಶ ಸರ್ಕಾರಕ್ಕೆ ಶಹಭಾಷ್ ಗಿರಿ ನೀಡಿದರು.

ಇನ್ನು ರಾಜ್ಯ ಸರ್ಕಾರದ ಗೃಹಲಕ್ಷ್ಮಿಯೋಜನೆಯ ಫಲಾನುಭವಿ ಮಹಿಳೆಯರು ಹಾಗು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಹೆಂಡ್ತಿಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರ್ತಿಲ್ಲ ಎಂದು ಗಂಡಂದಿರು ಹೇಳ್ತಿದ್ದಾರೆ. ಇದರಿಂದ ಮನೆಗಳು ಮುರಿದು ಹೋಗುವ ಪರಿಸ್ಥಿತಿ ಬಂದಿದೆ ಎಂದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

Tags:
error: Content is protected !!