ಮೈಸೂರು: ಉಪಲೋಕಾಯುಕ್ತ ಫಣೀಂದ್ರ ಅವರಿಂದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿದ ಫಣೀಂದ್ರ ಅವರು, ಪ್ರತಿ ವಾರ್ಡ್‌ಗಳಿಗೂ ಭೇಟಿ ನೀಡಿ ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಎಕ್ಸರೇ ಸ್ಕ್ಯಾನಿಂಗ್, ರಕ್ತ ಪರೀಕ್ಷೆ ವೈದ್ಯರ ಬಗ್ಗೆಯೂ ವಿಚಾರಿಸಿದರು.
ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ, ಶೌಚಾಲಯ ಹಾಗೂ ಸ್ವಚ್ಛತೆ ಬಗ್ಗೆ ತಾನೇ ಖುದ್ದಾಗಿ ವೀಕ್ಷಣೆ ಮಾಡಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆ ಸೌಜನ್ಯವಾಗಿ ವರ್ತಿಸುವಂತೆ ಸಲಹೆ ನೀಡಿದರು. ಈ ವೇಳೆ ಮಾತನಾಡಿದ ಫಣೀಂದ್ರ ಅವರು, ರೋಗಿಗಳಿಂದ ಚಿಕಿತ್ಸೆಗಾಗಿ ಹಣ ಸ್ವೀಕರಿಸಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಸೇರಿದಂತೆ ವೈದ್ಯರುಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.





