ಮೈಸೂರು: ನೀರಿಲ್ಲದೆ ಜೀವವಿಲ್ಲ ಹಾಗಾಗಿ ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಹೇಳಿದರು.
ನಗರದ ನಜರ್‌ಬಾದ್‌ನ ಖಾಸಗಿ ಹೋಟೆಲ್ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಶನಿವಾರ ವಿಶ್ವ ಜಲ ದಿನಾಚರಣೆ ಅಂಗವಾಗಿ ಹೋಟೆಲ್‌ಗಳಲ್ಲಿ ನೀರಿನ ಮಹತ್ವದ ಜಾಗೃತಿಯುಳ್ಳ ಕರ ಪತ್ರವನ್ನು ಅಂಟಿಸಿ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಹಕರು ನೀರನ್ನು ಹಿತಮಿತವಾಗಿ ಬಳಸುವ ಮೂಲಕ ಸಂರಕ್ಷಿಸಬೇಕೆಂದು ಮನವಿ ಮಾಡಿದರು.
ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್‌ಗಳ ಹೊಣೆಗಾರಿಕೆಯೂ ಹೌದು. ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವದ ಬಗ್ಗೆ ಹೋಟೆಲ್‌ಗಳು ಅರಿವು ಮೂಡಿಸುವ ಹೆಜ್ಜೆ ಇಡಬೇಕಾಗಿದೆ. ಗ್ರಾಹಕರು ಏನಾದರೂ ಅಂದು ಕೊಳ್ಳಲಿ ನೀರನ್ನು ಮಿತವಾಗಿ ಬಳಸಿ ಎಂಬಂತಹ ಜಾಗೃತಿಯ ಬರಹಗಳು ಹೋಟೆಲ್ ಗೋಡೆಗಳಲ್ಲಿ ಕಾಣಿಸುವಂತೆ ಪ್ರಕಟಿಸುವುದು ಒಳಿತು ಎಂದರು.
ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಸುರೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಜತ್ತಿ ಪ್ರಸಾದ್, ಮಹಾನ್ ಶ್ರೇಯಸ್, ಎಸ್.ಎನ್ ರಾಜೇಶ್, ರಾಕೇಶ್ ಹಾಜರಿದ್ದರು.
ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…