ಮೈಸೂರು: ಚಾಮುಂಡಿಬೆಟ್ಟದ ಅನ್ನದಾಸೋಹ ಭವನಕ್ಕೆ ವಿ-ಗಾರ್ಡ್ ಕಂಪನಿಯಿಂದ ಉಚಿತ ಶುದ್ಧ ಕುಡಿಯುವ ನೀರಿನ ಘಟಕದ ಆರ್‌ಓ ಪ್ಲಾಂಟ್‌ನ್ನು ಸಮರ್ಪಣೆ ಮಾಡಲಾಯಿತು.
ಚಾಮುಂಡಿಬೆಟ್ಟಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆಯಿತ್ತು. ಹೀಗಾಗಿ ಇದನ್ನು ಮನಗಂಡ ವಿ-ಗಾರ್ಡ್ ಕಂಪನಿ ಇಂದು ಅನ್ನದಾಸೋಹ ಭವನಕ್ಕೆ ಉಚಿತವಾಗಿ ಶುದ್ಧ ನೀರಿನ ಘಟಕವನ್ನು ಸಮರ್ಪಣೆ ಮಾಡಿದೆ.
ಚಾಮುಂಡೇಶ್ವರಿ ಕೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಚಾಮುಂಡಿ ಬೆಟ್ಟಕ್ಕೆ ಮೂಲಭೂತ ಸೌಕರ್ಯಗಳನ್ನು ಶಾಶ್ವತವಾಗಿ ಒದಗಿಸುವಂತೆ ಖಾಸಗಿ ಕಂಪನಿಯವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ವಿ-ಗಾರ್ಡ್ ಆರ್‌ಓ ಪ್ಲಾಂಟ್ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿ-ಗಾರ್ಡ್ ಕಂಪನಿಯ ಉಪಾಧ್ಯಕ್ಷ ಸೂರ್ಯಪ್ರಕಾಶ್, ಶಾಖೆ ವ್ಯವಸ್ಥಾಪಕ ಹರ್ಷೇಂದ್ರ ಪ್ರಸಾದ್ ಅವರು ಹಸ್ತಾಂತರಿಸಿದರು.
ಬಳಿಕ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷಿತ್ ಅವರು, ಹೊಸ ಕುಡಿಯುವ ನೀರಿನ ಘಟಕಕ್ಕೆ ಪೂಜೆ ಸಲ್ಲಿಸಿ ವಿ ಗಾರ್ಡ್ ಕಂಪನಿಗೆ ಹಾರೈಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…