ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು ಬಣ್ಣ ಬಣ್ಣದ ಹೂವುಗಳು ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು.
ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣಸ್ವಾಮಿ ದರ್ಶನ ಪಡೆದು ಪುನೀತರಾದರು.
ಇನ್ನು ಮೈಸೂರಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿಯೂ ಏಕಾದಶಿಯ ಸಂಭ್ರಮ ಕಳೆಗಟ್ಟಿತ್ತು.
ದತ್ತ ವೆಂಕಟೇಶ್ವರ ಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಭಕ್ತಗಣವೇ ಹರಿದುಬಂದಿತ್ತು. ರಾತ್ರಿಯವರೆಗೂ ಪೂಜಾ ಸಂಭ್ರಮ ಮುಂದುವರಿಯಲಿದ್ದು, ಭಕ್ತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ.





