ಮೈಸೂರು: ಒಂಟಿಕೊಪ್ಪಲ್‌ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಹಾಗೂ ವಿಜಯನಗರದ ಯೋಗಾನರಸಿಂಹ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ಕಡೆಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿದೆ.
ನಗರದ ಹಲವು ದೇವಾಲಯಗಳಲ್ಲಿ ಇಂದು(ಜನವರಿ.10) ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರ ದಂಡು ಹರಿದು ಬಂದಿದೆ. ಈ ವೇಳೆ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ಪ್ರವೇಶ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಲಕ್ಷ್ಮೀ ವೆಂಕಟರಮಣ ಸ್ವಾಮಿ ಹಾಗೂ ಯೋಗಾ ನರಸಿಂಹ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿವಿಧ ಬಗೆಯ ಹೂಗಳಿಂದ ದೇವರಿಗೆ ಅಲಂಕಾರ ಮಾಡಲಾಗಿದ್ದು, ಎಲ್ಲೆಲ್ಲೂ ಗೋವಿಂದಾ ಗೋವಿಂದಾ ಎಂಬ ನಾಮ ಸ್ಮರಣೆ ಕೇಳಿ ಬರುತ್ತಿದೆ. ಅಲ್ಲದೇ ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿರುವ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ನವದೆಹಲಿ: ಇಲ್ಲಿನ 23 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ಬಂಧಿಸಿ ವಿಚಾರಣೆಗೆ…
ಬೆಂಗಳೂರು: ಬೆಂಬಲ ಬೆಲೆ ಶೇಂಗಾ ಖರೀದಿಯ ನೋಂದಣಿ ಹಾಗೂ ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.…
ಬೆಂಗಳೂರು: ನನಗೆ ಧರ್ಮ ಹಾಗೂ ದೇವರ ಮೇಲೆ ನಂಬಿಕೆಯಿದ್ದು, ನಾನು ಮನಸ್ಸಿನ ನೆಮ್ಮದಿ, ರಕ್ಷಣೆ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ.…
ಬೆಂಗಳೂರು: ದೆಹಲಿಯಲ್ಲಿ ಫೆಬ್ರವರಿ.5ರಂದು ವಿಧಾನಸಭಾ ಚುನಾವಣೆ ನಡೆಸಯಲಿದ್ದು, ಕಾಂಗ್ರೆಸ್ ಮುಕ್ತ ಭಾರತಕ್ಕೆ ಕಾಂಗ್ರೆಸ್ ಸಹವರ್ತಿಗಳಿಂದಲೇ ಮುಹೂರ್ತ ಫಿಕ್ಸ್ ಆಗಿದೆ ಎಂದು…
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಮತ್ತು ಫೋಟೋಗಳನ್ನು ನೀಡುವಂತೆ ಹೈಕೋರ್ಟ್‌ಗೆ ನ್ಯಾಯಾಂಗ…
ಬೆಂಗಳೂರು: ಇಲ್ಲಿನ ಲಾಲ್‌ಬಾಗ್ ಉದ್ಯಾನವನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನ…