ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೊಂಟಕ್ಕೆ ಮೀಟರ್ ಕಟ್ಟಿ ಇದಕ್ಕೂ ಟ್ಯಾಕ್ಸ್ ಕಲೆಕ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ.
ಅಗತ್ಯ ವಸ್ತುಗಳು, ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಎಲ್ಲಾ ಪಕ್ಷಗಳು ಬೆಲೆ ಮಾಡಿವೆ.
ರಾಜ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಯಾರ ಮಾತನ್ನು ಕೇಳುತ್ತಿಲ್ಲ. ಒಂದು ಕಡೆ ಉಚಿತ ಕೊಡುಗೆ. ಮತ್ತೊಂದು ಕಡೆ ಜನ ಸಾಮಾನ್ಯರು ಉಪಯೋಗಿಸುತ್ತಿರುವ ಅಗತ್ಯ ವಸ್ತುಗಳ ದರ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಏಳು ಕೋಟಿ ಜನ ಇದ್ದಾರೆ. ಮುಂದಿನ ದಿನಗಳಲ್ಲಿ ಸೊಂಟಕ್ಕೆ ಮೀಟರ್ ಕಟ್ಟಿ ಇದಕ್ಕೂ ಟ್ಯಾಕ್ಸ್ ಕಲೆಕ್ಟ್ ಮಾಡಿ ಮಾಡಿ ಎಂದು ದರ ಏರಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.





