ಮೈಸೂರು ನಗರ

ಬಂಡೀಪುರ ರಾತ್ರಿ ಸಂಚಾರ ತೆರವು ವಿರೋಧಿಸಿ ವಾಟಾಳ್‌ ನಾಗರಾಜ್‌ ವಿನೂತನ ಪ್ರತಿಭಟನೆ

ಪ್ರಶಾಂತ್‌ ಎನ್‌ ಮಲ್ಲಿಕ್‌ 

ಮೈಸೂರು: ಬಂಡೀಪುರ ರಾತ್ರಿ ಸಂಚಾರ ತೆರವು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೆಂಗಿನಕಾಯಿ ಹೊಡೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಮೈಸೂರಿನ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ವಾಟಾಳ್‌ ನಾಗರಾಜ್‌, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅವರು, ಬಂಡೀಪುರ ರಾತ್ರಿ ಸಂಚಾರ ಪ್ರಾರಂಭ ಮಾಡಲಿಕ್ಕೆ ಹಲವು ಪ್ರಯತ್ನ ಮಾಡಲಾಗುತ್ತಿದೆ. ಇದರ ಹಿಂದೆ ಯಾರಿದ್ದಾರೆ, ಒತ್ತಡ ಹಾಕುತ್ತಿರುವವರು ಯಾರು ಎಂದು ಪ್ರಶ್ನೆ ಮಾಡಿದರು.

ಕರ್ನಾಟಕವು ಕೇರಳ ಸರ್ಕಾರಕ್ಕೆ ಮಣಿದು ರಾತ್ರಿ ಸಂಚಾರ ನಿಷೇಧ ತೆರವು ಮಾಡಿದ್ರೆ ಅಪಾಯ. ಇದರಿಂದ ಪ್ರಾಣಿ ಸಂಕುಲಗಳಿಗೆ ತೊಂದರೆಯಾಗುತ್ತದೆ. ನಮ್ಮಲ್ಲಿ ಹುಲಿಗಳ ಸಂತತಿ ಕಡಿಮೆಯಾಗುತ್ತಿದೆ. ಹೀಗಾಗಿ ರಾತ್ರಿ ಸಂಚಾರ ನಿಷೇಧ ತೆರವು ಮಾಡಬಾರದು. ನಿಷೇಧ ತೆರವು ಮಾಡಿದರೆ ಉಗ್ರ ಹೋರಾಟ ಮಾಡುವುದು ಗ್ಯಾರಂಟಿ ಎಂದು ರಾಜ್ಯ ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

5 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

5 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

5 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

5 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

5 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

5 hours ago