Mysore
17
scattered clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು: ಗ್ಯಾಸ್‌ ಸಿಲಿಂಡರ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು.

ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅವರು, ಹಾಲು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಬರೆ ಎಳೆಯುತ್ತಿದ್ದಾರೆ. ಇಷ್ಟಾದರೂ ನಮ್ಮ ರಾಜ್ಯದ ಜನ ಪ್ರತಿಭಟಿಸುತ್ತಿಲ್ಲ. ಎಷ್ಟೇ ಬೆಲೆ ಏರಿಕೆ ಮಾಡಿದರೂ ಸುಮ್ಮನಿರುತ್ತಾರೆ. ಸರ್ಕಾರಗಳ ವಿರುದ್ಧ ಸಾರ್ವಜನಿಕರು ಧ್ವನಿ ಎತ್ತಬೇಕು. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಭ್ರಷ್ಟರ ಪಕ್ಷಗಳು. ಭ್ರಷ್ಟಾಚಾರದ ಬಗ್ಗೆ ಭ್ರಷ್ಟರೆ ಹೋರಾಟ ನಡೆಸುತ್ತಿದ್ದಾರೆ. ಬೆಲೆ ಏರಿಕೆ ಮಾಡಿ ಜನಾಕ್ರೋಶ ಯಾತ್ರೆ ಬೇರೆ ಮಾಡುತ್ತಿದ್ದಾರೆ. ರಾಜಕಾರಣಿಗಳಿಗೆ ಬೆಲೆ ಏರಿಕೆಯ ಪರಿಣಾಮ ಬೀರುವುದಿಲ್ಲ. ಜನ ಸಾಮಾನ್ಯರು ಇವನ್ನೆಲ್ಲಾ ಪ್ರಶ್ನಿಸಬೇಕು ಎಂದು ಜನತೆಗೆ ಕರೆ ಕೊಟ್ಟರು.

Tags:
error: Content is protected !!