ಮೈಸೂರು: ಗ್ಯಾಸ್ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅವರು, ಹಾಲು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಬರೆ ಎಳೆಯುತ್ತಿದ್ದಾರೆ. ಇಷ್ಟಾದರೂ ನಮ್ಮ ರಾಜ್ಯದ ಜನ ಪ್ರತಿಭಟಿಸುತ್ತಿಲ್ಲ. ಎಷ್ಟೇ ಬೆಲೆ ಏರಿಕೆ ಮಾಡಿದರೂ ಸುಮ್ಮನಿರುತ್ತಾರೆ. ಸರ್ಕಾರಗಳ ವಿರುದ್ಧ ಸಾರ್ವಜನಿಕರು ಧ್ವನಿ ಎತ್ತಬೇಕು. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಭ್ರಷ್ಟರ ಪಕ್ಷಗಳು. ಭ್ರಷ್ಟಾಚಾರದ ಬಗ್ಗೆ ಭ್ರಷ್ಟರೆ ಹೋರಾಟ ನಡೆಸುತ್ತಿದ್ದಾರೆ. ಬೆಲೆ ಏರಿಕೆ ಮಾಡಿ ಜನಾಕ್ರೋಶ ಯಾತ್ರೆ ಬೇರೆ ಮಾಡುತ್ತಿದ್ದಾರೆ. ರಾಜಕಾರಣಿಗಳಿಗೆ ಬೆಲೆ ಏರಿಕೆಯ ಪರಿಣಾಮ ಬೀರುವುದಿಲ್ಲ. ಜನ ಸಾಮಾನ್ಯರು ಇವನ್ನೆಲ್ಲಾ ಪ್ರಶ್ನಿಸಬೇಕು ಎಂದು ಜನತೆಗೆ ಕರೆ ಕೊಟ್ಟರು.
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…