ಮೈಸೂರು ನಗರ

ಎಂಇಎಸ್‌ ನಿಷೇಧಿಸುವಂತೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಪ್ರತಿಭಟನೆ ನಡೆಸಿದರು.

ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ನಗರದ ಹಾರ್ಡಿಂಗ್ ವೃತ್ತದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಾಟಾಳ್ ನಾಗರಾಜ್ ಅವರು ತಮಟೆ ಹೊಡೆಯುತ್ತಾ, ಘೋಷಣೆಗಳನ್ನು ಕೂಗುತ್ತಾ ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ಎಂಇಎಸ್ ವಿರುದ್ಧದ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಲು ವಾಟಾಳ್ ನಾಗರಾಜ್ ಮುಂದಾದಾಗ, ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪೋಸ್ಟರ್‌ಗಳನ್ನು ಕಿತ್ತುಕೊಂಡರು. ಇದರಿಂದ ವಾಟಾಳ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ವಾಗ್ವಾದದ ನಡುವೆಯೇ ಆಕ್ರೋಶಗೊಂಡ ವಾಟಾಳ್ ಅವರು ಪೋಸ್ಟರ್ ಹರಿದು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, “ಮೈಸೂರಿನಲ್ಲಿ ಡ್ರಗ್ಸ್ ಪತ್ತೆಹಚ್ಚಲು ಮಹಾರಾಷ್ಟ್ರ ಪೊಲೀಸರನ್ನೇ ಕರೆಸಿಕೊಳ್ಳುವ ಸ್ಥಿತಿ ಬಂದಿದೆ. ಇದು ರಾಜ್ಯ ಸರ್ಕಾರದ ವೈಫಲ್ಯ” ಎಂದು ವಾಗ್ದಾಳಿ ನಡೆಸಿದರು.

ಇನ್ನೂ, “ಎಂಇಎಸ್ ಸಂಘಟನೆಯನ್ನು ತಕ್ಷಣವೇ ನಿಷೇಧಿಸಬೇಕು. ಇಲ್ಲವಾದರೆ ಜನವರಿ.15ರಂದು ಬೆಳಗಾವಿಗೆ ಮುತ್ತಿಗೆ ಹಾಕಲಾಗುವುದು. ಎಂಇಎಸ್ ಕಚೇರಿಗಳಿಗೆ ನುಗ್ಗುತ್ತೇವೆ. ರಾಜ್ಯಾದ್ಯಂತ ಕನ್ನಡ ಪರ ಹೋರಾಟ ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago