Vatal Nagaraj protest
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದರು.
ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಅವರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಗ್ರೇಟರ್ ಮೈಸೂರು, ಮೇಕೆದಾಟು ಹಾಗೂ ಮಹಾದಾಯಿ ಯೋಜನೆ ಜಾರಿ ಆಗಲೇಬೇಕು, ಗಡಿ ಭಾಗದ ಕನ್ನಡಿಗರ ರಕ್ಷಣೆ ಆಗಬೇಕು ಎಂದು ಆಗ್ರಹಿಸಿದರು. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಗೆ ಮೈಸೂರಿನ ಸ್ಥಳೀಯ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…