Mysore
29
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯ ಅಂಕ ಕಡಿತ ವಿಚಾರಕ್ಕೆ ವಾಟಾಳ್‌ ನಾಗರಾಜ್‌ ಆಕ್ರೋಶ

vatal nagaraj

ಮೈಸೂರು: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದ 125 ಅಂಕವನ್ನು 100 ಇಳಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕನ್ನಡ ವಿಷಯಕ್ಕೆ ಇರುವ 125 ಅಂಕಗಳನ್ನು 100ಕ್ಕೆ ಇಳಿಕೆ ಮಾಡಬಾರದು. ಒಂದು ವೇಳೆ ಇಳಿಕೆ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಚಾಮರಾಜನಗರದಲ್ಲಿ ಹುಲಿ ಮತ್ತು ಕೋತಿಗಳಿಗೆ ವಿಷಪ್ರಶಾನ ಪ್ರಕರಣ ಸಂಬಂಧ ಮಾತನಾಡಿದ ಅವರು, ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ಕಾಡಿನ ರಕ್ಷಣೆ ಮಾಡಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯ. ಯಾರು ಅಪರಾಧಿಗಳಾಗಿದ್ದಾರೆ ಅವರಿಗೆ ಶಿಕ್ಷೆ ಆಗಲೇಬೇಕು. ವನ್ಯಜೀವಿ ರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

Tags:
error: Content is protected !!