ಮೈಸೂರು ನಗರ

ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವು ನಿಷೇಧ: ವಾಟಾಳ್‌ ನಾಗರಾಜ್‌ ಆಕ್ರೋಶ

ಮೈಸೂರು: ನೆರೆಯ ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವುದು ಖಂಡನೀಯ. ಈಗ ರೈತರಿಗೆ ಗಂಭೀರವಾದ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ರೂಪಾಯಿ ಮಾವಿನಕಾಯಿ ದೇಶದಿಂದ ದೇಶಕ್ಕೆ ಹೋಗುತ್ತವೆ. ಶ್ರೀನಿವಾಸಪುರದಲ್ಲಿ ತೋತಾಪುರಿ ಹೆಚ್ಚಾಗಿ ಬೆಳೆಯುತ್ತಾರೆ. ಆಂಧ್ರದ ತಿರುಪತಿ ದೇವಸ್ಥಾನಕ್ಕೆ ನಮ್ಮ ರಾಜ್ಯ 40% ಜನ ಹೋಗುತ್ತಾರೆ. ಅಲ್ಲಿನ ಲಡ್ಡುಗೆ ನಮ್ಮ ನಂದಿನಿ ತುಪ್ಪ ಕೊಡುತ್ತಿದ್ದೇವೆ. ಗಂಧದ ಮರವನ್ನು ಸಹ ಕೊಟ್ಟಿದ್ದೇವೆ. ಇಷ್ಟಿದ್ದರೂ ನಮ್ಮ ಮಾವಿನಕಾಯಿ ನಿಷೇಧ ಮಾಡಿದ್ದಾರೆ. ಇದನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ನಾವು ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಸಿದ್ದರಾಮಯ್ಯ ಖಡಕ್ ರಾಜಕಾರಣಿ. ಎರಡನೇ ಬಾರಿ ಸಿಎಂ ಅದ ಮೇಲೆ ಮೊದಲಿದ್ದ ಗತ್ತು ಗಮ್ಮತ್ತು ಸಿದ್ದರಾಮಯ್ಯರಿಗೆ ಇಲ್ಲ. ಸಿದ್ದರಾಮಯ್ಯ ವೈಯಕ್ತಿಕವಾಗಿ ಒಳ್ಳೆಯ ಮನುಷ್ಯ. ಆದರೆ ಈಗ ಆಡಳಿತದಲ್ಲಿ ಯಾಕೋ ಗತ್ತು ಗಮ್ಮತ್ತು ಕಾಣಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಗ್ಗೆ ಸಾಫ್ಟ್ ಕಾರ್ನರ್ ತೋರಿದರು.

ಇನ್ನು ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದಲ್ಲಿ 2 ಸಾವಿರ ರೂಪಾಯಿ ಟಿಕೆಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, 2 ಸಾವಿರ ರೂಪಾಯಿ ಟಿಕೆಟನ್ನು ಈ ಕೂಡಲೇ ರದ್ದು ಮಾಡಬೇಕು. ಜನ ಸಾಮಾನ್ಯರಿಗೆ ಅವಕಾಶ ಮಾಡಿಕೊಡಬೇಕು. ಅದನ್ನು ಬಿಟ್ಟು ದುಡ್ಡಿಗಾಗಿ, ಶ್ರೀಮಂತರಿಗೆ ಟಿಕೆಟ್ ಮಾಡಿ ಕರೆದುಕೊಂಡು ಹೋಗುವುದು ಸರಿಯಿಲ್ಲ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವ್ಯಾಪಾರೀಕರಣ ಮಾಡೋದು ಸರಿಯಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

31 mins ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

47 mins ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

1 hour ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

2 hours ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

2 hours ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

2 hours ago