prathap simha
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದರು.
ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಂದರ್ಭದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮ್ಮುಖದಲ್ಲಿ ಮನವಿ ಸಲ್ಲಿಸಿದ ಪ್ರತಾಪ್ ಸಿಂಹ, ಆದ್ಯತೆಯಾಗಿ ಪರಿಗಣಿಸುವಂತೆ ಕೋರಿದರು.
ನಗರದ ಕೆ.ಜಿ.ಕೊಪ್ಪಲಿನ ರೈಲ್ವೆ ಅಂಡರ್ ಬ್ರಿಡ್ಜ್ ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ರೈಲ್ವೆ ಅಂಡರ್ ಬ್ರಿಡ್ಜ್ ಅನ್ನು ವಿಸ್ತರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅಶೋಕಪುರಂ ರೈಲ್ವೆ ನಿಲ್ದಾಣವನ್ನು ಅಮೃತ ಭಾರತ ರೈಲ್ವೆ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಬೇಕು ಹಾಗೂ ಯಶವಂತಪುರ-ಬಾರ್ಮೆರ್ ಸಾಪ್ತಾಹಿಕ ರೈಲು(ರೈಲು ಸಂಖ್ಯೆ ೧೪೮೦೫/೦೬) ಸಂಚಾರವನ್ನು ಮೈಸೂರಿನವರೆಗೆ ವಿಸ್ತರಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಸಂಸದ ಸಿ.ಎಸ್. ಪುಟ್ಟರಾಜು ಹಾಜರಿದ್ದರು.
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…