Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ

ಮೈಸೂರು: ಖ್ಯಾತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಎಲ್.ಭೈರಪ್ಪ ಅವರು ಅಂತ್ಯಸಂಸ್ಕಾರ ನೆರವೇರಿತು. ಮೊದಲಿಗೆ ಎಸ್.ಎಲ್.ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಕೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ಹಲವು ಗಣ್ಯರು ಗೌರವ ಸಮರ್ಪಣೆ ಮಾಡಿದ್ದು, ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಪೊಲೀಸರಿಂದ ಗೌರವ ಸಲ್ಲಿಕೆ ಮಾಡಲಾಯಿತು.

ಇದನ್ನು ಓದಿ: ಮೈಸೂರು: ಸಾರ್ವಜನಿಕರಿಂದ ಸಾಹಿತಿ ಎಸ್.ಎಲ್.ಭೈರಪ್ಪ ಅಂತಿಮ ದರ್ಶನ

ಬಳಿಕ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಚಂದ್ರಶೇಖರ ಶಾಸ್ತ್ರೀ ನೇತೃತ್ವದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿದವು.

ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಮತ್ತು ಸಹನಾ ವಿಜಯ್‌ ಕುಮಾರ್‌ ಅವರು ಅಗ್ನಿಸ್ಪರ್ಶ ಮಾಡಿದರು.

ಅಂತ್ಯಸಂಸ್ಕಾರದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಚಿವ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್‌, ಶಾಸಕ ಟಿ.ಎಸ್.ಶ್ರೀವತ್ಸ, ಎಲ್.ನಾಗೇಂದ್ರ, ಮಾಜಿ ಸಂಸದ ಪ್ರತಾಪ್‌ ಸಿಂಹ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಎಸ್.ಎಲ್.ಭೈರಪ್ಪ ಅವರ ಕುಟುಂಬಸ್ಥರು ಭಾಗಿಯಾಗಿದ್ದರು.

Tags:
error: Content is protected !!