ಮೈಸೂರು: ಖ್ಯಾತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಎಲ್.ಭೈರಪ್ಪ ಅವರು ಅಂತ್ಯಸಂಸ್ಕಾರ ನೆರವೇರಿತು. ಮೊದಲಿಗೆ ಎಸ್.ಎಲ್.ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಕೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಗೌರವ ಸಮರ್ಪಣೆ ಮಾಡಿದ್ದು, ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಪೊಲೀಸರಿಂದ ಗೌರವ ಸಲ್ಲಿಕೆ ಮಾಡಲಾಯಿತು.
ಇದನ್ನು ಓದಿ: ಮೈಸೂರು: ಸಾರ್ವಜನಿಕರಿಂದ ಸಾಹಿತಿ ಎಸ್.ಎಲ್.ಭೈರಪ್ಪ ಅಂತಿಮ ದರ್ಶನ
ಬಳಿಕ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಚಂದ್ರಶೇಖರ ಶಾಸ್ತ್ರೀ ನೇತೃತ್ವದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿದವು.
ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಮತ್ತು ಸಹನಾ ವಿಜಯ್ ಕುಮಾರ್ ಅವರು ಅಗ್ನಿಸ್ಪರ್ಶ ಮಾಡಿದರು.
ಅಂತ್ಯಸಂಸ್ಕಾರದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ಟಿ.ಎಸ್.ಶ್ರೀವತ್ಸ, ಎಲ್.ನಾಗೇಂದ್ರ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಎಸ್.ಎಲ್.ಭೈರಪ್ಪ ಅವರ ಕುಟುಂಬಸ್ಥರು ಭಾಗಿಯಾಗಿದ್ದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…