Mysore
30
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಮೈಸೂರಿಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು.

ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಚಿವ ಎಚ್.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ ಡಾ.ಬೋರಲಿಂಗಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಸೇರಿದಂತೆ ಹಲವರು ಬರಮಾಡಿಕೊಂಡರು.

ಮಧ್ಯಾಹ್ನ 3 ಗಂಟೆಯ ವೇಳೆಗೆ ಉಪರಾಷ್ಟ್ರಪತಿ ರಾಧಾಕೃಷ್ಣನ್‌ ಅವರು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

Tags:
error: Content is protected !!